ಕಡಬ, ಜ 22 (DaijiworldNews/HR): ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ ನೀಡಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಬೇಕೆಂದು ದೇವಳದ ಆಡಳಿತ ವಿಭಾಗಕ್ಕೆ ಸೂಚಿಸಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕೊರೊನಾ ಬಗ್ಗೆ ಸರಕಾರದ ಅಧಿಕೃತ ಆದೇಶವನ್ನು ಗಮನಿಸಿಕೊಂಡು ಜಿಲ್ಲೆಯಲ್ಲಿ ಕೋವಿಡ್ ನಿಯಮಾವಳಿಗಳನ್ನು ಜಾರಿಗೆ ತರಲಾಗುವುದು" ಎಂದರು
ಇನ್ನು ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಸೇವೆಗಳನ್ನು ನಡೆಸುವ ಬಗ್ಗೆ ಮುಂದಿನ ದಿನದಲ್ಲಿ ಸಭೆ ಕರೆದು ತೀರ್ಮಾನಕ್ಕೆ ಬರಲಾಗುವುದು ಎಂದು ತಿಳಿಸಿದ್ದಾರೆ.