ಕಾರ್ಕಳ, ಜ 22(DaijiworldNews/MS): ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.22 ರ ಶನಿವಾರ ಜಾರ್ಕಳ ಮುಂಡ್ಲಿ ಎಂಬಲ್ಲಿ ವರದಿಯಾಗಿದೆ.
ಕಾರ್ಕಳದ ಕಲ್ಲೊಟ್ಟೆ ನಿವಾಸಿ ಸತೀಶ್(45) ಬದುಕಿನಲ್ಲಿ ಅಂತ್ಯ ಹೇಳಿದವರು.
ಸತೀಶ್ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ಆರ್ಥಿಕ ಅಡಚಣೆ ಘಟನೆಯೇ ಕಾರಣವೆನ್ನಲಾಗಿದೆ. ಈ ಬಗ್ಗೆ ಅಜೆಕಾರು ಠಾಣೆಯಲ್ಲಿ ಕೇಸುದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821