ಬೆಳ್ತಂಗಡಿ, ಡಿ08(SS); ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 8 ವಿಧಾನಸಭಾ ಕ್ಷೇತ್ರಗಳಲ್ಲಿ 7ರಲ್ಲಿ ಬಿಜೆಪಿ ಶಾಸಕರಿದ್ದಾರೆ. ಆದರೆ, ಯಾವೊಬ್ಬ ಶಾಸಕನಿಗೂ ಬಾರದ ಅನುದಾನ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಬಂದಿದೆ ಎಂದರೆ ಅದು ನಿಜವಾಗಿಯೂ ಹಾಸ್ಯಾಸ್ಪದ ಎಂದು ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿದರು.
ಪ್ರವಾಸಿ ಬಂಗಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಹರೀಶ್ ಪೂಂಜ ಮತ್ತು ಬಿಜೆಪಿಗರು ದುಡ್ಡಿನ ಬಲದಿಂದ ಜನತೆಯ ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಉಸ್ತುವಾರಿ ಸಚಿವರ ಕ್ಷೇತ್ರಕ್ಕೆ ಇನ್ನೂ 50ಕೋಟಿ ಅನುದಾನ ಬಂದಿಲ್ಲ. ಲೋಕೋಪಯೋಗಿ ಸಚಿವ ರೇವಣ್ಣ ಕ್ಷೇತ್ರಕ್ಕೂ50 ಕೋಟಿ ಅನುದಾನ ಬಂದಿಲ್ಲ. ಆದರೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಹೇಗೆ ಅಷ್ಟು ಮೊತ್ತದ ಅನುದಾನ ಬರಲು ಸಾಧ್ಯ ಎಂದು ಪ್ರಶ್ನಿಸಿದರು.
ತಮ್ಮ ಕ್ಷೇತ್ರದಲ್ಲಿ 6 ಬಾರಿ ಶಾಸಕರಾದ ಯ ಅಂಗಾರ ತರಿಸಿದ ಅನುದಾನವನ್ನೇ ಅವರು ಪ್ರಸ್ತಾಪ ಮಾಡಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಸಚಿವರ ಕ್ಷೇತ್ರಕ್ಕಿಂತ ಅಧಿಕ ಮೊತ್ತದ ಅನುದಾನವನ್ನು ಓರ್ವ ಶಾಸಕ ತನ್ನ ಕ್ಷೇತ್ರಕ್ಕೆ ನೀಡಿರುವರೇ ಎಂದು ವ್ಯಂಗ್ಯವಾಡಿದ್ದಾರೆ.