ಶಹಬಾದ್, ಡಿ08(SS): ಸೀಲ್ ಮಾಡಲಾಗಿದ್ದ ಇವಿಎಂ ಮೆಷಿನ್ ರಸ್ತೆಯಲ್ಲಿ ಪತ್ತೆಯಾಗಿದ್ದು, ಈ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ.
ರಾಜಸ್ಥಾನದ ಬರಾನ್ ಜಿಲ್ಲೆಯ ಕಿಶನ್ ಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ. ಅಬ್ದುಲ್ ರಫೀಕ್ ಮತ್ತು ನವಾಲ್ ಸಿಂಗ್ ಪಟ್ವಾರಿ ಅಮಾನತುಗೊಂಡವರು.
ಇವಿಎಂ ಅನ್ನು ಸ್ಟ್ರಾಂಗ್ ರೂಂನಲ್ಲಿ ಇರಿಸಬೇಕಾಗಿತ್ತು. ಆದರೆ ಈ ವಿಚಾರದಲ್ಲಿ ಇಬ್ಬರು ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.