ಉಡುಪಿ ಡಿ08(SS): ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ನಡೆಸಲಾಗುತ್ತಿದ್ದು, ಈ ಪ್ರಕರಣವನ್ನು ಹೆಬ್ರಿ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಬಸ್ಸಿನಲ್ಲಿದ್ದ ಸುಮಾರು 15 ಕೆಜಿ ದನದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಡರಾತ್ರಿ ಕಾರ್ಯಾಚರಣೆ ನಡೆಸಿದ ಹೆಬ್ರಿ ಪೊಲೀಸರು ಹೆಬ್ರಿ ನಗರ ಸಮೀಪ ಬಸ್ ಸೀಜ್ ಮಾಡಿ, ಅಕ್ರಮ ದನದ ಮಾಂಸವನ್ನು ವಶ ಪಡೆದುಕೊಂಡಿದ್ದಾರೆ.
ಅನೇಕ ದಿನಗಳ ಹಿಂದೆಯೇ ಶಿವಮೊಗ್ಗ ಮತ್ತು ಮಂಗಳೂರು ನಡುವೆ ಸಂಚರಿಸುವ ಎಸ್ ವಿ ಆರ್ ಎಂ ಬಸ್ ನಲ್ಲಿ ಪ್ರತಿನಿತ್ಯ ಅಕ್ರಮವಾಗಿ ದನದ ಮಾಂಸವನ್ನು ಸಾಗಾಟ ಮಾಡಲಾಗುತ್ತಿದೆ ಎಂದು ಹೆಬ್ರಿ ಪೊಲೀಸರಿಗೆ ದೂರು ಬಂದಿತ್ತು. ಈ ದೂರಿನ ಅನ್ವಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಸದ್ಯ ವಶಕ್ಕೆ ಪಡೆದ 15 ಕೆ.ಜಿ ದನದ ಮಾಂಸವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ.