ಮಂಗಳೂರು, ಜ 26 (DaijiworldNews/HR): ಪ್ರಯಾಣಿಕರೊಬ್ಬರು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ವಿಭಾಗದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಮೂಲಕ ದುಬೈನಿಂದ ಮಂಗಳೂರಿಗೆ ಬಂದಿದ್ದ ಪ್ರಯಾಣಿಕನಿಂದ 584 ಗ್ರಾಂ ತೂಕದ 29,14,160 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಇನ್ನು ಪ್ರಯಾಣಿಕ ಚಿನ್ನವನ್ನು ಪೇಸ್ಟ್ ರೂಪದಲ್ಲಿ ತನ್ನ ದೇಹದಲ್ಲಿ ಬಚ್ಚಿಟ್ಟುಕೊಂಡು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದ ಎನ್ನಲಾಗಿದೆ.
ಕಸ್ಟಮ್ಸ್ ಅಧಿಕಾರಿಗಳು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.