ಕಾರ್ಕಳ,ಜ 27 (DaijiworldNews/HR): ಸಾಮಾಜಿಕ ಚಿಂತನೆಯೊಂದಿಗೆ ತಮ್ಮ ಜೀವನವನ್ನೇ ಮುಡಿಪಾಗಿ ಇಟ್ಟುಕೊಳ್ಳುವ ಪತ್ರಕರ್ತರು ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಲೇ ಬೇಕು ಎಂದು ಕಾರ್ಕಳ ಕೆಇಎಂಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ ಎಸ್ ಇಮ್ತಿಯಾಜ್ ಅಹ್ಮದ್ ಹೇಳಿದರು.
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಪ್ರವಾಸಿ ಬಂಗಲೆಯಲ್ಲಿ ಆಯೋಜಿಸಿದ ಆರೋಗ್ಯಯುತ ಬದುಕಿನಲ್ಲಿ ಪತ್ರಕರ್ತರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಪತ್ರಕರ್ತರು ಹಾಗೂ ಕುಟುಂಬದ ಸದಸ್ಯರಿಗೆ ಕನ್ನಡಕ ವಿತರಿಸಿ ಮಾತನಾಡಿದರು.
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಅಧ್ಯಕ್ಷತೆ ವಹಿಸಿದ್ದು, ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಆರ್ ಬಿ ಜಗದೀಶ್, ತಾಲೂಕು ಘಟಕದ ಕಾರ್ಯದರ್ಶಿ ಕೃಷ್ಣ ನಾಯ್ಕ, ಕೋಶಾಧಿಕಾರಿ ಬಾಲಕೃಷ್ಣ ಭೀಮಹುಳಿ ಉಪಸ್ಥಿತರಿದ್ದರು.