ಕಾರ್ಕಳ, ಜ 30 (DaijiworldNews/HR): ಮೂಡಬಿದ್ರೆಯ ಎಂ.ಕೆ. ಅನಂತರಾಜ ದೈಹಿಕ ಶಿಕ್ಷಣ ಕಾಲೇಜು ಆವರಣದಲ್ಲಿ ನಡೆದ 6ನೇ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಸ್ಪರ್ಧೆಯಲ್ಲಿ ಪ್ರಕೃತಿ ನ್ಯಾಷನಲ್ ಸ್ಕೂಲ್ನ ವಿದ್ಯಾರ್ಥಿನಿ ಗಣ್ಯರವರು 11 ರಿಂದ13 ವರ್ಷ ದ ಬಾಲಕಿಯರ ವಿಭಾಗದಲ್ಲಿ ಭಾಗವಹಿಸಿ, ಕುಮಿಟೆ ಮತ್ತು ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಬೆಳ್ಳಿ ಪದಕಗಳನ್ನುಹಾಗೂ ಪ್ರಶಸ್ತಿ ಪತ್ರವನ್ನು ಪಡೆದುಕೊಂಡಿದ್ದಾರೆ.
18 ವರ್ಷದ ಬಾಲಕರ ವಿಭಾಗದಲ್ಲಿ ಪ್ರಕೃತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಖ್ಯಾತ ಪೂಜಾರಿರವರು ಕುಮಿಟೆಯಲ್ಲಿ ಪ್ರಥಮ ಮತ್ತು ಕಟದಲ್ಲಿ ತೃತೀಯ ಸ್ಥಾನವನ್ನು ಪಡೆದು ಒಂದು ಚಿನ್ನದ ಪದಕ ಹಾಗೂ ಕಂಚಿನ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ಪಡೆದುಕೊಂಡಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರು ಮತ್ತು ಶಿಕ್ಷಕ ವೃಂದದಿಂದ ಅಭಿನಂದನೆ ಸಲ್ಲಿಸಿದೆ.