ಉಡುಪಿ, ಜ 31 (DaijiworldNews/HR): ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ನಾಳೆಯಿಂದ ಯಾವುದೇ ಕಾಲೇಜು ಆವರಣದಲ್ಲಿ ಯಾವುದೇ ಗೊಂದಲ ನಿರ್ಮಾಣಕ್ಕೆ ಅವಕಾಶವಿಲ್ಲ. ಮಾಧ್ಯಮ, ಸಂಘಸಂಸ್ಥೆ, ಸಂಘಟನೆಗೆ ಪ್ರವೇಶ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬೇರೆ ಬೇರೆ ಸಂಘ-ಸಂಸ್ಥೆಗಳು, ಮಾಧ್ಯಮದವರು, ಯಾರನ್ನು ನಾಳೆಯಿಂದ ಕಾಲೇಜು ಆವರಣಕ್ಕೆ ಬರಲು ಅವಕಾಶ ನೀಡುವುದಿಲ್ಲ. ಇನ್ನೆರಡು ತಿಂಗಳಲ್ಲಿ ಪರೀಕ್ಷೆ ಬರುತ್ತದೆ. ಉಳಿದ ಮಕ್ಕಳ ಪೋಷಕರು ದೂರುತ್ತಿದ್ದಾರೆ. ಈ ಸಮಸ್ಯೆಗಳನ್ನು ಪರಿಹರಿಸಿ. ಉಳಿದ ಮಕ್ಕಳಿಗೆ ಓದುವುದಕ್ಕೆ ಸಮಸ್ಯೆಯಗುತ್ತಿದೆ" ಎಂದರು.
ಇನ್ನು ಈ ಹಂತದಲ್ಲಿ ಹಿಜಾಬ್ ಗೆ ಅನುಮತಿ ಕೊಡಲು ಸಾಧ್ಯವಿಲ್ಲ. ಸರಕಾರ, ಸಮಿತಿ ತೀರ್ಮಾನ ಮಾಡಿದಂತೆ ಸಮವಸ್ತ್ರದಲ್ಲಿ ಕಾಲೇಜಿಗೆ ಬರಬೇಕು. ಎಲ್ಲಾ ವಿಚಾರಗಳನ್ನು ಪೋಷಕರಿಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಗಿದ್ದು, ತರಗತಿಯಲ್ಲಿ ಹಿಜಬ್ ಧರಿಸಿ ಪಾಠ ಕೇಳುವ ಅವಕಾಶ ಇಲ್ಲ ಎಂದಿದ್ದಾರೆ.
ಮನೆಯ ಪುರುಷರ ಜೊತೆ ಮಾತನಾಡಿ ತೀರ್ಮಾನ ಎಂದು ಪೋಷಕರು ಹೇಳಿದ್ದಾರೆ. ಹಿಜಾಬ್ ತೆಗೆದು ಕ್ಲಾಸಿಗೆ ಬರುವುದಾದರೆ ನಾಳೆಯಿಂದ ಬನ್ನಿ. ನಾಳೆಯಿಂದ ಯಾವುದೇ ಕಾಲೇಜು ಆವರಣದಲ್ಲಿ ಗೊಂದಲ ನಿರ್ಮಾಣಕ್ಕೆ ಅವಕಾಶವಿಲ್ಲ. ಕಾಲೇಜಿನ ಬೇರೆ ಮಕ್ಕಳಿಂದ ಪೋಷಕರಿಂದ ದೂರುಗಳು ಬಂದಿವೆ. ಮನವಿ ಕೊಡುವುದಿದ್ದರೆ ಡಿಸಿಗೆ ಕೊಡಿ ಕಾಲೇಜಿಗೆ ಯಾರೂ ಬರುವಂತಿಲ್ಲ. ಶಿಸ್ತು ಪಾಲಿಸುವವರು ಕಾಲೇಜಿಗೆ ಬರಬಹುದು ಇನ್ನು ಗೊಂದಲಕ್ಕೆ ಅವಕಾಶ ಇಲ್ಲ" ಎಂದು ಹೇಳಿದ್ದಾರೆ.