ಸುಬ್ರಮಣ್ಯ, ಫೆ 02(DaijiworldNews/MS): ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಕೋವಿಡ್ನಿಂದ ಹೇರಲಾಗಿದ್ದ ಸೇವೆಗಳ ನಿರ್ಬಂಧ ತೆರವು ಮಾಡಲಾಗಿದೆ. ರಾಜ್ಯದಲ್ಲಿ ಸೋಂಕು ತಗ್ಗಿದ ಹಿನ್ನೆಲೆಯಲ್ಲಿ ನಿರ್ಬಂಧಗಳನ್ನು ತೆರವು ಮಾಡಲಾಗಿದ್ದು, ಸೇವೆಗಳಿಗೆ ಅನುಮತಿ ನೀಡಲಾಗಿದೆ.
ಈ ಹಿಂದೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದು ಪಡಿಸಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ತೀವ್ರತೆ ಇಳಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಮತ್ತು ಸೇವೆಗಳಿಗೆ ಅನುಮತಿ ನೀಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಕಟಣೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಈ ಹಿಂದಿನಂತೆಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಸೇರಿದಂತೆ, ಎಲ್ಲಾ ಸೇವೆಗಳನ್ನು ನೆರವೇರಿಸಲು ಭಕ್ತಾದಿಗಳಿಗೆ ಅವಕಾಶ ಕಲ್ಪಿಸಿ ಕೊಡಲಾಗಿದೆ.
ಸೇವಾಕರ್ತರು ಕನಿಷ್ಠ ಕೋವಿಡ್ ಲಸಿಕೆ ಪಡೆದಿರುವ ಬಗ್ಗೆ ವರದಿ ಹಾಜರಿ ಪಡಿಸುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ