ಉಡುಪಿ, ಫೆ 03 (DaijiworldNews/HR): ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಉಸ್ತುವಾರಿ ಸಚಿವ ಎಸ್ ಅಂಗಾರ ಹೇಳಿದ್ಡಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಂಕೀರ್ಣದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಕಚೇರಿ ಇಂದು ಉದ್ಘಾಟಿಸಿ ಬಳಿಕ ಮಾತನಾಡಿದ ಅವರು, ಹಿಜಾಬ್ ವಿಚಾರದಲ್ಲಿ ಒಂದೊಂದು ರೀತಿಯ ನಿಯಮಾವಳಿ ಮಾಡಲು ಆಗಲ್ಲ. ಸರಕಾರ ಏನು ಕ್ರಮತೆಗೆದುಕೊಳ್ಳುತ್ತದೋ ಆ ರೀತಿ ಮಾಡುತ್ತೇವೆ. ಯಾರು ತಮ್ಮ ಮನಸಿಗೆ ಬೇಕಾದಂತೆ ನಿಯಮ ಮಾಡಲು ಆಗುವುದಿಲ್ಲ. ತಜ್ಞರ ಸಮಿತಿ ಯನ್ನು ಸರ್ಕಾರ ರಚಿಸಿದೆ. ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಮಾಡಲಾಗುವುದು ಎಂದರು.
ಇನ್ನು ಫೆಬ್ರವರಿ ೧೧ ರಂದು ಬಜೆಟ್ ಪೂರ್ವಭಾವಿ ಸಭೆ ಮುಖ್ಯ ಮಂತ್ರಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ. ಅದಕ್ಕಿಂತ ಮೊದಲು ಸ್ಥಳೀಯ ಮೀನುಗಾರ ಮುಖಂಡರೊಂದಿಗೆ ಚರ್ಚಿಸಲಾಗುವುದು. ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು. ಸೋಮವಾರ ಮಧ್ಯಾಹ್ನ ದವರೆಗೆ ಉಡುಪಿ ಕಚೇರಿಯಲ್ಲಿ ಉಡುಪಿಯ ಸಾರ್ವಜನಿಕರಿಗೆ ಲಭ್ಯವಿರುತ್ತೇನೆ ಎಂದು ಹೇಳಿದ್ದಾರೆ.
ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ. ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ನಗರ ಅಧ್ಯಕ್ಷ ರು ಮಹೇಶ್ ಠಾಕೂರ್ ಉಪಸ್ಥಿತರಿದ್ದರು.