ಕಾಸರಗೋಡು, ಫೆ 03 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 714 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,052 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 5,212 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 17,262 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಇದುವರೆಗೆ ಜಿಲ್ಲೆಯಲ್ಲಿ 1,61,178 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,53,566 ಮಂದಿ ಗುಣ ಮುಖರಾಗಿದ್ದಾರೆ.
ಕೊರೊನಾಗೆ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 1,046 ಕ್ಕೆ ತಲುಪಿದ್ದು, ಕೇರಳದಲ್ಲಿ ಗುರುವಾರ 42,677 ಮಂದಿಗೆ ಸೋಂಕು ದೃಢಪಟ್ಟಿದೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 14 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ.