ಮಂಗಳೂರು, ಫೆ 04(DaijiworldNews/KP): ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಚಿಲಿಂಬಿ ಬಳಿಯ ಕೋಟೆಕಣಿ ರಸ್ತೆ ಮತ್ತು ಕುಳೂರು ಫೆರ್ರಿ ರಸ್ತೆ ಬಳಿ ನಡೆದಿದೆ.
ಫೆಬ್ರವರಿ 3 ರಂದು ಸಂಜೆ 4 ಗಂಟೆ ಸುಮಾರಿಗೆ ಕಾರೊಂದು ಕೋಟೆಕಣಿಯಿಂದ ಇಳಿಜಾರಿನ ರಸ್ತೆಯಲ್ಲಿ ತೆರಳುತ್ತಿರುವ ವೇಳೆ, ಲೇಡಿಹಿಲ್ನಿಂದ ಉರ್ವಾ ಸ್ಟೋರ್ ಕಡೆಗೆ ಹೋಗುತ್ತಿದ್ದ ಹೋಂಡಾ ಆಕ್ಟಿವಾಕ್ಕೆ ಢಿಕ್ಕಿ ಹೊಡೆದ ನಂತರ ಚಾಲಕನಿಗೆ ಕಾರು ನಿಲ್ಲಿಸಲಾಗದೆ ಪಕ್ಕದ ಅಪಾರ್ಟ್ಮೆಂಟ್ನ ಕಾಂಪೌಂಡ್ಗೆ ಢಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಪಘಾತದ ತೀವ್ರತೆಗೆ ಆಕ್ಟಿವಾದಲ್ಲಿದ್ದ ಇಬ್ಬರು ಸವಾರರು ರಸ್ತೆ ಬದಿಗೆ ಬಿದ್ದಿದ್ದಾರೆ, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.