ಮಂಗಳೂರು, ಫೆ 05 (DaijiworldNews/MS): ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅವರ ನೂತನ ಕಚೇರಿಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಫೆ. 5 ರ ಶನಿವಾರ ಉದ್ಘಾಟಿಸಿದರು.
ಆ ಬಳಿಕ ಮಾತನಾಡಿದ ಸಂಸದರು, 'ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅವರ ನೂತನ ಕಚೇರಿಯನ್ನು ಡಿಸಿ ಕಚೇರಿಯ ಅವರಣದಲ್ಲಿ ಉದ್ಘಾಟಿಸಿದ್ದೇವೆ. ತಮ್ಮ ಇಲಾಖೆಯಲ್ಲಿ ಬದಲಾವಣೆ ತಂದ ಯುವ ಸಚಿವರು ಖಂಡಿತಾ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿ ಮಾದರಿ ಜಿಲ್ಲೆಯನ್ನಾಗಿ ಮಾಡುತ್ತಾರೆ' ಎಂಬ ಆಶಯ ವ್ಯಕ್ತಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ಕುಮಾರ್ ಮಾತನಾಡಿ, 'ಜಿಲ್ಲೆಯ ಅಭಿವೃದ್ದಿಗಾಗಿ ಚರ್ಚಿಸಲು ಫೆ.11ರಂದು ಕೆಡಿಪಿ ಸಭೆ ನಡೆಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ' ಎಂದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಉತ್ತರ ಶಾಸಕ ಡಾ ಭರತ್ ಶೆಟ್ಟಿ, ಶಾಸಕ ಬಂಟ್ವಾಳ ರಾಜೇಶ್ ನಾಯ್ಕ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತಿತರರು ಉಪಸ್ಥಿತರಿದ್ದರು.