ಪುತ್ತೂರು, ಫೆ 08 (DaijiworldNews/MS): ಬಾಲಕಿಯರ ಮೇಲೆ ಮದ್ರಸದಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಮದ್ರಸದ ಅಧ್ಯಾಪಕನನ್ನು ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕುಂಡಡ್ಕ ಸಂಶುಲ್ ಹುದಾ ಮದ್ರಸ ಶಾಲೆಯ ಅಧ್ಯಾಪಕ ಉಸ್ತಾದ್ ಸಿರಾಜುದ್ದೀನ್ ಮದನಿ ಎಂದು ಗುರುತಿಸಲಾಗಿದೆ. ಈತನನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ.
ಪುತ್ತಿಲ ಗ್ರಾಮದ ಕುಂಡಡ್ಕ ದ ಸಂಶುಲ್ ಹುದಾ ಮದ್ರಸ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹೆಣ್ಣುಮಕ್ಕಳಿಬ್ಬರು ಉಸ್ತಾದ್ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ಬಗ್ಗೆ ತಾಯಿಗೆ ತಿಳಿಸಿದ್ದರು. ಈ ನಿಟ್ಟಿನಲ್ಲಿ ಅವರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಮೂಲತ: ಉರುವಾಲುಪದವು ನಿವಾಸಿ ಉಸ್ತಾದ್ ಸಿರಾಜುದ್ದೀನ್ ಮದನಿ ವಿರುದ್ದ ಪೋಕ್ಸೊ ಕಾಯ್ದೆ ದಾಖಲಿಸಿಕೊಂಡ ಪುತ್ತೂರು ಮಹಿಳಾ ಠಾಣೆಯ ಪೊಲೀಸರು ದಾಖಲಿಸಿಕೊಂಡ ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಇನ್ ಸ್ಪೆಕ್ಟರ್ ಎಂ.ಎನ್ ರಾವ್ , ಎಸ್ಸೈ ಸೇಸಮ್ಮ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.