ಕಾಸರಗೋಡು, ಫೆ 10 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 227 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 671 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 2,702 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 11,968 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಇದುವರೆಗೆ ಜಿಲ್ಲೆಯಲ್ಲಿ 1,63,934 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು,1,59,821ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1,182 ಮಂದಿ ಮೃತಪಟ್ಟಿದ್ದಾರೆ.