ಉಡುಪಿ, ಫೆ 12 (DaijiworldNews/HR): ರಾಜ್ಯದ ಪದವಿ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣಪೀಠ ನೀಡಿರುವ ಮಧ್ಯಂತರ ಆದೇಶವನ್ನು ಪಾಲನೆ ಮಾಡುವ ಕುರಿತಂತೆ ಇಂದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಡಿಯೋ ಕಂಫರೆನ್ಸ್ ಮುಖಾಂತರ ಎಲ್ಲಾ ಜಿಲ್ಲೆಗಳು ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪೊಲೀಸ್ ಅಧೀಕ್ಷಕರು ಹಾಗೂ ಪೊಲೀಸ್ ಕಮಿಷನರ್ ರವರಿಗೆ ಮಾನ್ಯ ಮುಖ್ಯಮಂತ್ರಿಗಳು ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು
ಈ ಹಿನ್ನೆಲೆಯಲ್ಲಿ ವಸ್ತ್ರಸಂಹಿತೆ ಕುರಿತು ಉಚ್ಚ ನ್ಯಾಯಾಲಯದ ಪೂರ್ಣಪೀಠ ನೀಡಿರುವ ಆದೇಶವನ್ನು ಪಾಲನೆ ಮಾಡುವಂತೆ ಉಡುಪಿ ಜಿಲ್ಲೆಯ ಎಲ್ಲಾ ಪದವಿಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ, ಫೆಬ್ರವರಿ 12 ರ ಶನಿವಾರ ದಂದು ಶಿಕ್ಷಕರ ಮತ್ತು ಪೋಷಕರ ಸಭೆ, ಕಾಲೇಜು ಅಭಿವೃದ್ಧಿ ಸಮಿತಿ ಸಭೆ ಹಾಗು ಕಾಲೇಜು ಆಡಳಿತ ಮಂಡಳಿ ಸಭೆ ಗಳನ್ನು ಕರೆದು, ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕಾಲೇಜುಗಳ ಪ್ರಾಂಶುಪಾಲರಿಗೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹಾಗೂ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚನೆ ನೀಡಿದ್ದಾರೆ.