ಮಂಗಳೂರು, ಡಿ12(SS): ಕೇಂದ್ರದಲ್ಲಿ 5 ವರ್ಷಗಳ ಕಾಲ ಬಿಜೆಪಿ ನಡೆಸಿದ ಜನವಿರೋಧಿ ಆಡಳಿತಕ್ಕೆ ಮತದಾರರು ಸರಿಯಾದ ಉತ್ತರವನ್ನೇ ನೀಡಿದ್ದಾರೆ ಎಂದು ಮಾಜಿ ಶಾಸಕ ಜೆ.ಆರ್ ಲೋಬೋ ಹೇಳಿದರು.
ನಗರದ ಕಾಂಗ್ರೆಸ್ ಭವನದ ಎದುರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕೇವಲ 5 ವರ್ಷದಲ್ಲಿಯೇ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಇದಕ್ಕೆ ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶವೇ ಸಾಕ್ಷಿ. ಈ ಚುನಾವಣೆ ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆಯ ದಿಕ್ಸೂಚಿ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸುತ್ತದೆ. ಮಾತ್ರವಲ್ಲ, ದೇಶದ ಅಧಿಕಾರದ ಗದ್ದುಗೆ ಏರುತ್ತದೆ ಎಂದು ಅಭಿಪ್ರಾಯಪಟ್ಟರು.
ಸದ್ಯದಲ್ಲಿಯೇ ಬಿಜೆಪಿ ಸರ್ಕಾರದ ದುರಾಡಳಿತವನ್ನು ಜನರ ಮುಂದೆ ಇಡುತ್ತೇವೆ. ಪಂಚ ರಾಜ್ಯ ಚುನಾವಣೆಯ ಫಲಿತಾಂಶ ಮುಂದಿನ ಚುನಾವಣೆಗೆ ಸ್ಫೂರ್ತಿಯಾಗಲಿದೆ. ಬಿಜೆಪಿ ಮುಂದಿನ ದಿನಗಳಲ್ಲಿ ದೇಶದಿಂದ ಮುಕ್ತವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.