ಉಡುಪಿ, ಫೆ. 13 (DaijiworldNews/SM): ರಾಜ್ಯದಲ್ಲಿ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಜಿಲ್ಲಾಡಲಿತ ಮನವಿ ಮಾಡಿಕೊಂಡಿದೆ. ಸೋಮವಾರದಂದು ಶಾಲೆಗಳು ಆರಂಭವಾಗಲಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಲಾಗಿದೆ.
ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದ್ದು, ಪ್ರೌಢ ಶಾಲಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಜಾಬ್ ವಿವಾದ ಹಿನ್ನೆಲೆ ಶಾಲೆಗಳಿಗೆ ರಜೆ ನೀಡಲಾಗಿತ್ತು. ಸದ್ಯ ಈಗ ರಾಜ್ಯದಲ್ಲಿ ನಾಳೆಯಿಂದ ಪ್ರೌಢಶಾಲೆ ಪುನಾರಂಭಗೊಳ್ಳಲಿದೆ.
ಈ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ.