ಮಂಗಳೂರು, ಫೆ. 13 (DaijiworldNews/SM): ಮೀನು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ. ನಗರದ ಸುರತ್ಕಲ್ ಮುಕ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
ಉಡುಪಿ ಮಲ್ಪೆ ಕಡೆಯಿಂದ ಮಂಗಳೂರು ಕಡೆ ಪ್ರಯಾಣಿಸುತ್ತಿದ್ದ ಲಾರಿ ಪಲ್ಟಿಯಾಗಿ ಅವಘಡ ಸಂಭವಿಸಿದೆ. ಮೀನಿನ ಲಾರಿ ಪಲ್ಟಿಯಾಗಿ ರಸ್ತೆಯಲ್ಲಿ ಮೀನು ಚೆಲ್ಲಾಪಿಲ್ಲಿಯಾಗಿದೆ.