ಮಂಗಳೂರು, ಫೆ. 14 (DaijiworldNews/SM): ಉಡುಪಿಯಿಂದ ಆರಂಭಗೊಂಡಿರುವ ಹಿಜಾಬ್ ವಿವಾದ ರಾಜ್ಯಾದ್ಯಂತ ವಿಸ್ತರಿಸಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರಿನ ಶಾಲಾ ಕಾಲೇಜು ಆವರಣದ ಸುತ್ತ ನಿಷೇಧಾಜ್ಞೆ ಹೊರಡಿಸಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಕಮಿಷನರ್ ಅವರು ಈ ಆದೇಶ ಹೊರಡಿಸಿದ್ದಾರೆ. ಅದರಂತೆ ಸಂಸ್ಥೆಯ ೨೦೦ ಮೀಟರ್ ಸುತ್ತ ಯಾರಿಗೂ ಅನಗತ್ಯ ಪ್ರವೇಶ ಇಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ, ಸಾರ್ವಜನಿಕರು ಸಹಕಾರ ನೀಡುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.