ಸುಳ್ಯ, ಫೆ. 15 (DaijiworldNews/SM): ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಪಲ್ಟಿಯಾಗಿರುವ ಘಟನೆ ತಾಲೂಕಿನ ಪಂಜಿಗಾರಿನಲ್ಲಿ ನಡೆದಿದ್ದು, ಲಾರಿಯಲ್ಲಿದ್ದವರಿಗೆ ಗಂಭೀರ ಗಾಯಗಳಾಗಿವೆ.
ರಬ್ಬರ್ ಶೀಟ್ ಹೇರಿಕೊಂಡು ಹೋಗುವ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಲಾರಿ ಉರುಳಿ ಬಿದ್ದಿದೆ. ಈ ವೇಳೆ ಲಾರಿನಲ್ಲಿದ್ದವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳಾನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.