ಕಾರ್ಕಳ, ಡಿ 13(SM): ಹೊಸ್ಮಾರು-ನಾರಾವಿ ಬಳಿಯಿರುವ ಖಾಸಗಿ ವಿದ್ಯಾ ಸಂಸ್ಥೆಯ ಶಿಕ್ಷಕ ವಿದ್ಯಾರ್ಥಿನಿಯೊಂದಿಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂದಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿಯ ಪೆರಾಡಿ ನಿವಾಸಿ ಪ್ರಸಾದ್ ಬಂಧಿತ ಆರೋಪಿ.
ಆರೋಪಿ ಶಿಕ್ಷಕ ವಿದ್ಯಾರ್ಥಿಯೊಬ್ಬಳ ಜತೆ ತರಗತಿಯಲ್ಲೇ ರಾಸಲೀಲೆ ನಡೆಸಿದ್ದ. ಕಾಮುಕ ಶಿಕ್ಷಕನ ಕೃತ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೂಲಗಳ ಪ್ರಕಾರ ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿದೆ ಎನ್ನಲಾಗಿದೆ.
ಆದರೆ ರಾಸಲೀಲೆಯ ವೀಡಿಯೋ ಫೇಸ್ ಬುಕ್, ವಾಟ್ಸಾಪ್ನಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಯಾರೂ ಕೂಡ ಪೊಲೀಸರಿಗೆ ದೂರನ್ನು ನೀಡಿರಲಿಲ್ಲ. ಈ ಹಿನ್ನೆಲೆ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು, ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.
ಕಾರ್ಕಳ ಗ್ರಾಮಾಂತರ ಠಾಣಾ ಸರ್ಕಲ್ ಇನ್ಸ್ ಪೆಕ್ಟರ್ ಹಾಲಾಮೂರ್ತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.