ಬಂಟ್ವಾಳ, ಫೆ 18 (DaijiworldNews/MS): ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ನಿವೃತ್ತ ಹೆಲ್ತ್ ಇನ್ಸ್ ಪೆಕ್ಟರ್, ಬಿ.ಸಿ.ರೋಡ್ ನಿವಾಸಿ ಸುರೇಂದ್ರ ಮಯ್ಯ (71) ಚಿಕಿತ್ಸೆ ಫಲಕಾರಿಯಾಗದೆ ಫೆ.18ರಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಂಟ್ವಾಳ ತಾಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸುಮಾರು 37 ವರ್ಷಗಳ ಕಾಲ ಕರ್ತವ್ಯ ಸಲ್ಲಿಸಿದ್ದ ಅವರು ಫೆ.6ರಂದು ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರ ಮುಂಭಾಗ ಸ್ಕೂಟರ್ ನಲ್ಲಿ ಮನೆ ಕಡೆ ಹೋಗುತ್ತಿದ್ದ ವೇಳೆ ಸ್ಕಿಡ್ ಆಗಿ ಬಿದ್ದಿ ಗಂಬೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೃತರು ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ಇಂದಿರಾ ಸಹಿತ ಇಬ್ಬರು ಪುತ್ರರನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.