ಪುತ್ತೂರು, ಫೆ 20 (DaijiworldNews/HR): ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮಂಡ್ಯಗಳ ಎಂಬಲ್ಲಿ ಕಾರುಗಳೆರಡರ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಮೃತಪಟ್ಟವರನ್ನು ಹೊಂಡೈ ಕಾರಿನ ಚಾಲಕ ರಾಜು(35) ಎಂದು ಗುರುತಿಸಲಾಗಿದೆ.
ಪುತ್ತೂರಿನಿಂದ ಸುಳ್ಯದ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಮತ್ತು ಮಡಿಕೇರಿಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಹೊಂಡೈ ಕಾರು ಮುಖಾಮುಖಿ ಢಿಕ್ಕಿಯಾಗಿದ್ದು, ಅಪಘಾತದಿಂದ ಎರಡೂ ಕಾರುಗಳು ನಜ್ಜುಗುಜ್ಜಾಗಿದೆ.
ಇನ್ನು ಮಂಗಳೂರು ತಾಲೂಕಿನ ಬಜ್ಪೆ ನಿವಾಸಿಗಳಾದ ರಾಜು ಪೂಜಾರಿ(42) ಅವರ ಪತ್ನಿ ನೇತ್ರಾವತಿ(40), ಪುತ್ರಿ ಜ್ಯೋತಿ(25) ಹಾಗೂ ಪುತ್ರ ಚೇತನ್(22) ಗಾಯಗೊಂಡಡಿದ್ದು, ಈ ಪೈಕಿ ಜ್ಯೋತಿ ಅವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.