ಸುಳ್ಯ, ಫೆ 21 (DaijiworldNews/HR): ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಆರೋಪದಲ್ಲಿ ನ್ಯಾಯಾಲಯದಿಂದ ಬಂಧನ ವಾರಂಟ್ ಗೊಳಗಾಗಿ ತಲೆಮರೆಸಿಕೊಂಡಿದ್ದ ಸುಬ್ರಹ್ಮಣ್ಯದ ಎಸ್ಎಸ್ಪಿಯು ಕಾಲೇಜಿನ ಪ್ರೌಢಶಾಲಾ ಶಿಕ್ಷಕ ಗುರುರಾಜ್ ಇಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ವಿದ್ಯಾರ್ಥಿನಿಯೊಬ್ಬಳನ್ನು ಅತ್ಯಾಚಾರ ಮಾಡಿದ ಆರೋಪಕ್ಕೊಳಗಾಗಿ ಬಂಧನಕ್ಕೊಳಗಾಗಿದ್ದು, ಒಂದೇ ದಿನದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು.
ಇನ್ನು ಈ ಜಾಮೀನನ್ನು ಪ್ರಶ್ನಿಸಿ ವಿದ್ಯಾರ್ಥಿನಿಯ ಮನೆಯವರು ಹೈಕೋರ್ಟ್ ಮೊರೆ ಹೋಗಿ ಆರೋಪಿಯ ಜಾಮೀನು ರದ್ದುಗೊಂಡಿತ್ತು. ಬಳಿಕ ಬಂಧನ ವಾರಂಟ್ ಹೊರಡಿಸಲಾಗಿತ್ತು. ಬಳಿಕ ಪೊಲೀಸರಿಗೆ ಸಿಗದೆ ತಲೆ ಮರೆಸಿಕೊಂಡಿದ್ದ ಗುರುರಾಜ್ ಇಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರಾಗಿದ್ದು ಆರೋಪಿಗೆ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.