ಮಂಗಳೂರು, ಫೆ 21 (DaijiworldNews/HR): ಬೈಕ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಶಕ್ತಿನಗರದಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಶಕ್ತಿನಗರದ ಪ್ರಜ್ವಲ್(18) ಎಂದು ಗುರುತಿಸಲಾಗಿದೆ.
ಮೃತಪಟ್ಟ ಯುವಕ ಕೆಪಿಟಿಯಲ್ಲಿ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿಗಾಗಿ ನೀರಿಕ್ಷಿಸಲಾಗಿದೆ.