ಕಾಸರಗೋಡು: ಫೆ 21 (DaijiworldNews/HR): ಕೇರಳದ ಕುಂಜತ್ತೂರಿನಿಂದ ಮಂಗಳೂರಿಗೆ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಪ್ರಫುಲ್ ರಾಜ್(23) ಮತ್ತು ಅವಿನಾಶ್ (24) ಎಂದು ಗುರುತಿಸಲಾಗಿದೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ನಾರ್ಲ ಪಡೀಲ್ ರಾಮನಗರ ಎಂಬಲ್ಲಿ ಕಾರಿನಲ್ಲಿ ಅಕ್ರಮ ಮಾದಕ ವಸ್ತುವಾದ ಗಾಂಜಾವನ್ನು ಕೇರಳದಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತ್ರತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ 2.220 ಕೆಜಿ ತೂಕದ ಗಾಂಜಾ, 2 ಮೊಬೈಲ್ ಫೋನ್ ಗಳು ಹಾಗೂ ಮಾರುತಿ ಸ್ವಿಪ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ ರೂ. 5,50,400 ಆಗಬಹುದು ಎಂದು ಅಂದಾಜಿಸಲಾಗಿದೆ.
ಇನ್ನು ಆರೋಪಿಗಳ ಪೈಕಿ ಅವಿನಾಶ್ ಎಂಬಾತನು ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಕಾರಿ ವಾಹನಕ್ಕೆ ಹಾನಿಗೊಳಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದನು.
ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ಯವರಾದ ರಾಜೇಂದ್ರ ಬಿ, ಪ್ರದೀಪ ಟಿ ಆರ್ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದಾರೆ.