ಮಂಗಳೂರು, ಫೆ 22 (DaijiworldNews/MS): ಕಾಸರಗೋಡು ಮೂಲದ ಕಳ್ಳ ಕದ್ದ ವಾಚ್ ಅನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದನೆಂಬ ಮಾಹಿತಿ ಲಭ್ಯವಾಗಿ ಆತನನ್ನು ಹಿಡಿಯಲು ಬಂದ ಮಂಗಳೂರು ಉತ್ತರ ಠಾಣೆಯ ಪೊಲೀಸರಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ನಗರದ ಸೆಂಟ್ರಲ್ ಮಾರ್ಕೆಟ್ ಬಳಿ ಸೋಮವಾರ ಸಂಜೆ ಸಂಭವಿಸಿದೆ.
ಪೊಲೀಸ್ ಸಿಬ್ಬಂದಿ ವಿನೋದ್ ಅವರಿಗೆ ಕಳ್ಳ ಚೂರಿಯಂತಹ ಆಯುಧದಿಂದ ಇರಿದು ಪರಾರಿಯಾಗಿದ್ದಾನೆ. ವಿನೋದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು , ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.