ಕಾಸರಗೋಡು, ಫೆ. 23 (DaijiworldNews/SM): ಜಿಲ್ಲೆಯಲ್ಲಿ ಬುಧವಾರ 94 ಮಂದಿಗೆ ಕೊರೋನ ಪಾಸಿಟಿವ್ ದೃಢ ಪಟ್ಟಿದ್ದು, 76 ಮಂದಿ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 686 ಮಂದಿ ಚಿಕಿತ್ಸೆಯಲ್ಲಿದ್ದಾರೆ.
3,887 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ 1,65,886 ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,63,242 ಮಂದಿ ಗುಣಮುಖರಾಗಿದ್ದಾರೆ.