ಮಂಗಳೂರು, ಡಿ15(SS):ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಬಾಕಿ ಇರುವಂತೆಯೇ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಲು ಆರಂಭಿಸಿವೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಾಸೆ ಇದೆ. ಟಿಕೆಟ್ ಆಕಾಂಕ್ಷಿಗಳಲ್ಲಿ ನಾನೂ ಒಬ್ಬ. ಹೈಕಮಾಂಡ್ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದ.ಕ. ಲೋಕಾಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರು ಅಧಿಕ ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ನಾನು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಒಂದು ವೇಳೆ ಹೈಕಮಾಂಡ್ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಕೂಡಾ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ಅವರಿಗೆ ಟಿಕೆಟ್ ನೀಡಿದರೆ ಸ್ವಾಗತ. ನಾನು ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ.