ಕಾಸರಗೋಡು, ಫೆ 25 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 48 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 138 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 576 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 3,186 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಇದುವರೆಗೆ ಜಿಲ್ಲೆಯಲ್ಲಿ 1,65,988 ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,63,460 ಮಂದಿ ಗುಣಮುಖರಾಗಿದ್ದಾರೆ.