ನವದೆಹಲಿ, ಡಿ15(SS): ಡಿಸೆಂಬರ್ ತಿಂಗಳಲ್ಲಿ 5 ದಿನ ಬ್ಯಾಂಕ್ಗಳು ಮುಚ್ಚಲ್ಪಡಲಿವೆ ಎಂಬ ಸುದ್ದಿ ಇದೀಗ ಚರ್ಚೆಯಾಗುತ್ತಿದೆ. ಮುಷ್ಕರ, ಹಬ್ಬ, ವಾರಾಂತ್ಯ ರಜೆಗಳ ಪರಿಣಾಮವಾಗಿ ಒಟ್ಟು 5 ದಿನಗಳ ಕಾಲ ಬ್ಯಾಂಕ್ ಬಂದ್ ಆಗಿರಲಿವೆ ಎಂದು ತಿಳಿದುಬಂದಿದೆ.
ಬ್ಯಾಂಕ್ ಅಧಿಕಾರಿಗಳು ಮತ್ತು ನೌಕರರು ಪ್ರತ್ಯೇಕವಾಗಿ ಎರಡು ದಿನ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಉದ್ದೇಶಿಸಿದ್ದು, ಡಿ.21ಕ್ಕೆ ಬ್ಯಾಂಕ್ ಆಫೀಸರ್ಸ್ ಯೂನಿಯನ್ ಮುಷ್ಕರಕ್ಕೆ ಕರೆ ನೀಡಿದೆ. ಡಿ.22ಕ್ಕೆ ನಾಲ್ಕನೇ ಶನಿವಾರವಾದ ಕಾರಣ ಬ್ಯಾಂಕ್ಗೆ ರಜೆ ಇದ್ದು, ಡಿ.23 ಭಾನುವಾರ ಮತ್ತು ಡಿ.25ಕ್ಕೆ ಕ್ರಿಸ್ವುಸ್ ರಜೆ ಇದೆ.
ಬ್ಯಾಂಕ್ ಒಕ್ಕೂಟಗಳ ಮಹಾವೇದಿಕೆ (ಯುಎಫ್ಬಿಯು) ಡಿ.26ರಂದು ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಡಿ.24ಹೊರತುಪಡಿಸಿ ಉಳಿದ ಐದು ದಿನ ಬ್ಯಾಂಕ್ ಕಾರ್ಯನಿರ್ವಹಿಸುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.