ಮಂಗಳೂರು, ಫೆ. 27 (DaijiworldNews/SM): ಇಲ್ಲಿನ ಕೂಳೂರು ಸಮೀಪದ ಪಂಜಿಮೊಗರು ಎಂಬಲ್ಲಿ ಪ್ರಾರ್ಥನಾಲಯ ದ್ವಂಸ ಪ್ರಕರಣದ ಎಲ್ಲಾ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಡಿವೈಎಫ್ಐ ಪಂಜಿಮೊಗರು ವಲಯ ಸಮಿತಿಯಿಂದ ಕಾವೂರು ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ. ಹಾಗೂ ಬಿಡುಗಡೆಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿದರು.
ಇನ್ನು ಅಲ್ಪಸಂಖ್ಯಾತರ ವಿರುದ್ಧ ನಿರಂತರವಾಗಿ ದಬ್ಬಾಳಿಕೆ ನಡೆಯುತ್ತಿದ್ದು ಇದರ ವಿರುದ್ಧವೂ ಕೂಡ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಇಂತಹ ಕಾರ್ಯಗಳಿಗೆ ಸ್ಥಳೀಯ ಶಾಸಕರು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.