ಮಂಗಳೂರು ಅ 19: ಜಪ್ಪಿನ ಮೊಗರು ಪ್ರದೇಶವನ್ನು ಪ್ರವಾಸೋದ್ಯಮ ತಾಣವನ್ನಾಗಿ ಮಾರ್ಪಡಿಸಿ ವಿಶ್ವ ಮಟ್ಟದಲ್ಲಿ ಗುರುತಿಸುವಂತ ಯೋಜನೆಗಳನ್ನು ಮುಂದಿನ ದಿನಗಳಲ್ಲಿ ಆರಂಭಿಸಲಾಗುವುದು ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಜೆ.ಆರ್ ಲೋಬೋ ಹೇಳಿದರು. ಗುರುವಾರ ನಡೆದ ಜಪ್ಪಿನ ಮೊಗರು ಮುಖ್ಯರಸ್ತೆಯ ಕಾಂಕ್ರೀಟಿಕರಣದ ಕಾಮಗಾರಿಯ ಗುದ್ದಲಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು ಮಂಗಳೂರು ನಗರ ಅಭಿವೃದ್ದಿಗಾಗಿ 2 ಸಾವಿರ ಕೋಟಿ ರೂಪಾಯಿಗಳ ಯೋಜನಾ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಇದೇ ವೇಳೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಜಿಲ್ಲಾ ಯುವ ಕಾಂಗ್ರೇಸ್ ನ ಅಧ್ಯಕ್ಷ ಮಿಥುನ್ ರೈ , ಪಾಲಿಕೆ ಸದಸ್ಯ ಜೆ ಸುರೇಂದ್ರ ಕಂಕನಾಡಿ ಮತ್ತಿತರರು ಉಪಸ್ಥಿತರಿದ್ದರು.