ಮಂಗಳೂರು, ಫೆ 28 (DaijiworldNews/MS): ಮಾ. 2ರಂದು ನಿಗದಿಯಾಗಿದ್ದ ಮಂಗಳೂರು ಮಹಾನಗರ ಪಾಲಿಕೆಯ 23ನೆ ಅವಧಿಯ ಮೇಯರ್, ಉಪ ಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯನ್ನು ಮುಂದೂಡಲಾಗಿದೆ.
ಸರ್ವೋಚ್ಚ ನ್ಯಾಯಾಲಯ ಆದೇಶವೊಂದು, ಮೇಯರ್ ಚುನಾವಣೆಗೂ ಅನ್ವಯವಾಗುವುದೇ ಎಂಬ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ದಕ್ಷಿಣಕನ್ನಡ ಜಿಲ್ಲಾಧಿಕಾರಿಗಳು , ಬೆಂಗಳೂರು ನಗರಾಭಿವೃದ್ದಿ ಇಲಾಖೆಯ ಕಾರ್ಯದರ್ಶಿಗಳಿಗೆ ಹಾಗೂ ಸರ್ಕಾರಕ್ಕೆ ಪತ್ರ ಬರೆದಿದ್ದು, ಸ್ಪಷ್ಟೀಕರಣ ಇಲ್ಲಿಯವರೆಗೆ ಸ್ವೀಕೃತವಾಗಿರದ ಕಾರಣ ಮಾ.೨ ರಂದು ನಿಗದಿಯಾಗಿದ್ದ ಮಂಗಳೂರು ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿಗಳ ಚುನಾವಣೆಯನ್ನು, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಉಲ್ಲೇಖಿತ ಪತ್ರದಲ್ಲಿ ತಿಳಿಸಿದಂತೆ ಮುಂದೂಡಲಾಗಿದೆ ಎಂದು ಮಂಗಳೂರು ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.