ಮಂಗಳೂರು, ಫೆ. 28 (DaijiworldNews/SM): ಕೇಂದ್ರ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಸೋಮವಾರದಂದು ನಗರದ ಕೊರ್ಡೆಲ್ ಚರ್ಚ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಹೆದ್ದಾರಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಹಾಗೂ ಬಿ.ಸಿ.ರೋಡ್- ಪುಂಜಾಲಕಟ್ಟೆ ದ್ವಿಪಥ ರಸ್ತೆ ಲೋಕಾರ್ಪಣೆಗೊಳಿಸಿದರು.
ಮಂಗಳೂರಿಗೆ ಆಗಮಿಸಿದ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಮುಖ್ಯಮಂತ್ರಿ ಬಸವಾರ್ಜ್ ಬೊಮ್ಮಾಯಿ ಸೇರಿದಂತೆ ಗಣ್ಯರು ಸ್ವಾಗತಿಸಿದರು. ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವರಾದ ಸುನಿಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಎಸ್ ಅಂಗಾರ ಭಾಗವಹಿಸಿದ್ದರು.
ಸಮಾರಂಭದಲ್ಲಿ ಕೇಂದ್ರ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಮಂಗಳೂರಿನಿಂದ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಸಾವಿರಾರು ಕೋಟಿ ಯೋಜನೆಗಳಿಗೆ ಚಾಲನೆ ನೀಡಿದರು.