ಕಾರ್ಕಳ, ಮಾ 03 (DaijiworldNews/HR): ವೃದ್ಧರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಕ್ರೆ ಕದಿಕೆ ಎಂಬಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಆತ್ಮಹತ್ಯೆ ಮಾಡಿಕೊಂಡವರನ್ನು ಕೃಷ್ಣ ನಾಯ್ಕ(75) ಎಂದು ಗುರುತಿಸಲಾಗಿದೆ.
ಮೃತರ ಪತ್ನಿ ರತಿನಾಯ್ಕ ಅಂಗನವಾಡಿ ಸಹಾಯಕಿಯಾಗಿ ದುಡಿಯುತ್ತಿದ್ದು, ಮಾರ್ಚ್ 2ರಂದು ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದಾಗ ಕೃಷ್ಣ ನಾಯ್ಕ್ ಮನೆಯಲ್ಲಿ ಇದ್ದರು. ಸಂಜೆ ಮನೆಗೆ ಹಿಂತಿರುಗಿದ್ದ ಸಂದರ್ಭದಲ್ಲಿ ಕೃಷ್ಣ ನಾಯ್ಕ್ ಮನೆಯಲ್ಲಿ ಇಲ್ಲದ ಕಾರಣ ಹುಡುಕಾಡಿದಾಗ ಮನೆಯ ಹಿಂಬದಿಯಲ್ಲಿರುವ ಮರಕ್ಕೆ ಏಣಿ ಇಟ್ಟುಕೊಂಡು ನೈಲಾನ್ ಮೂಲಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.
ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821