ಮಂಗಳೂರು, ಅ 19: ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ತಕ್ಷಣ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು, ಜಿಲ್ಲಾ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಹರೀಶ್ ಕುಮಾರ್ ಆಗ್ರಹಿಸಿದ್ದಾರೆ. ನಗರದಲ್ಲಿ ಗುರುವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಬಿಜೆಪಿ ವತಿಯಿಂದ ವಿಟ್ಲದಲ್ಲಿ ನಡೆದ ಮರಳು ಸಮಸ್ಯೆ ವಿರುದ್ಧ ನಡೆದ ಉಪವಾಸ ಸತ್ಯಗ್ರಹದ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಹಾಗೂ ಪುತ್ತೂರು ಶಾಸಕಿ ಶಕುಂತಲಾ ಶೆಟ್ಟಿಯನ್ನು ಅವಹೇಳನಕಾರಿ ನಿಂದಿಸಿದ್ದರೆ ಹೀಗಾಗಿ ತಕ್ಷಣ ರಾಜೀನಾಮೆ ನೀಡಬೇಕೆಂದು ಹೇಳಿದರು. ಬಿಜೆಪಿ ಪಕ್ಷವೂ ಸಂಸ್ಕೃತಿ ಸಂಸ್ಕಾರಗಳನ್ನು ಗೌರವಿಸುತ್ತೇವೆ ಎಂಬ ಮಾತುಗಳನ್ನಾಡುತ್ತಿರುತ್ತಾರೆ. ಆದರೆ ರಾಜ್ಯದ ಗೌರಾವಾನ್ವಿತ ಸಚಿವರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದಾರೆ. ಹೀಗಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ವಾರದೊಳಗಾಗಿ ಕ್ಷಮೆಯಾಚಿಸದಿದ್ದರೆ ಮುಂದೆ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡುತ್ತೇವೆ ಎಂದರು.
ಇದೇ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಮೀನುಗಾರರ ಕಾಂಗ್ರೇಸ್ ನ ಅಧ್ಯಕ್ಷ, ಯು ವಿ ಸಭಾಪತಿ, ಮೀನುಗಾರಿಕಾ ಉದ್ಯೋಗವೂ ಕೇವಲ ಒಂದು ಜಾತಿಗೆ ಮಾತ್ರ ಸೀಮಿತವಾಗಿಲ್ಲ. ಸುಮಾರು 32 ಮಂದಿ ಈ ಉದ್ಯೋಗದಲ್ಲಿ ತೊಡಗಿಕೊಂಡಿದ್ದು ಈ ಸಮುದಾಯವನ್ನು ಪ್ರತಿನಿಧಿಸುವ ಸಂಸದರ ಅಗತ್ಯವಿದೆ ಎಂದರು.