ಕಾಸರಗೋಡು, ಮಾ 05 (DaijiworldNNews/HR): ಜಿಲ್ಲೆಯಲ್ಲಿ ಶನಿವಾರ 13 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 49 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 242 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 1,385 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,66,246 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,64,536 ಮಂದಿ ಗುಣಮುಖರಾಗಿದ್ದಾರೆ.