ಕಾಸರಗೋಡು, ಮಾ 06 (DaijiworldNews/HR): ಜಿಲ್ಲೆಯಲ್ಲಿ ಭಾನುವಾರ 22 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 84 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 178 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 1,181 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,66,268 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,64,596 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 1,190 ಕ್ಕೆ ತಲಪಿದ್ದು, ಕೇರಳದಲ್ಲಿ ಇಂದು 1,408 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.