ವಿಟ್ಲ, ಮಾ 08 (DaijiworldNews/DB): ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ಮಂಗಳವಾರ ನಡೆದ ಸರಣಿ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ರಸ್ತೆಯಲ್ಲಿ ಸಂಚರಿಸುತ್ತಿದ್ದ ಆಕ್ಟೀವಾ ಸ್ಕೂಟರ್ ಗೆ ಹಿಂದಿನಿಂದ ಬಂದ ಟ್ರಾಕ್ಟರ್ ಢಿಕ್ಕಿ ಹೊಡೆದ ಪರಿಣಾಮ ಆಕ್ಟೀವಾ ಮುಂಭಾಗದಲ್ಲಿ ಇದ್ದ ಟಿಪ್ಪರ್ ಗೆ ಗುದ್ದಿದೆ. ಈ ವೇಳೆ ದ್ವಿಚಕ್ರ ವಾಹನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.