ಮಂಗಳೂರು, ಮಾ 09 (DaijiworldNews/MS): ಶಿವಮೊಗ್ಗದಲ್ಲಿ ನಡೆದ ಹರ್ಷ ಕೊಲೆ ಪ್ರಕರಣ ಹಾಗೂ ಈ ಹಿಂದೆ ಹಾಕಿರುವ ಅನೇಕ ಆಕ್ಷೇಪಾರ್ಹ ಬರಹ ಪೋಸ್ಟ್ ಹಾಕಿರುವ 'ಮಂಗ್ಳೂರು ಮುಸ್ಲಿಂ' ಹೆಸರಿನ ಪೇಸ್ ಬುಕ್ ಖಾತೆಯನ್ನು ಅರಬ್ ರಾಷ್ಟ್ರದಲ್ಲಿ ಕುಳಿತು ನಿರ್ವಹಣೆ ಮಾಡುತ್ತಿರುವುದು ತನಿಖೆಯಿಂದ ತಿಳಿದುಬಂದಿದೆ ಪ್ರಕರಣದ ಸಮಗ್ರ ತನಿಖೆಯನ್ನು ಕರ್ನಾಟಕ ಅಪರಾಧ ತನಿಖಾ ವಿಭಾಗ (ಸಿಐಡಿ ) ವಹಿಸಿಕೊಂಡಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಮಂಗ್ಳೂರು ಮುಸ್ಲಿಂ ಪೇಜ್' ವಿರುದ್ದ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿ ಕೈಗೆತ್ತಿಕೊಂಡಿದ್ದು, ರಾಜ್ಯ ಇಂಟೆಲಿಜೆನ್ಸ್ ಸೇರಿದಂತೆ ಬೇರೆ ತನಿಖಾ ತಂಡಗಳು ಸಮನ್ವಯ ಸಾಧಿಸಿಕೊಂಡು ಸಾಮಾಜಿಕ ಜಾಲತಾಣದ ಬಗ್ಗೆ ನಿಗಾಯಿಟ್ಟಿವೆ. ಅಗತ್ಯಬಿದ್ದ ಸಂದರ್ಭದಲ್ಲಿ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಇನ್ನೊಂದೆಡೆ, ಬೆಂಗಳೂರು ದಕ್ಷಿಣ ಪೊಲೀಸ್ ಠಾಣೆಯು ಹಿಜಾಬ್ ಕುರಿತ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಪೀಠದ ಭಾಗವಾಗಿರುವ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಮಂಗಳೂರು ಮುಸ್ಲಿಂ ಫೇಸ್ಬುಕ್ ಪೇಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ.