ಮಂಗಳೂರು, ಮಾ 09 (DaijiworldNews/DB): ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್ ಸಿಬಂದಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವಿಟ್ಲದಲ್ಲಿ ಬುಧವಾರ ನಡೆದಿದೆ.
ಎಣ್ಮಕಜೆ ಗ್ರಾಮದ ಸಾರಡ್ಕ ನಿವಾಸಿ ಗಣೇಶ್ ನಾಯ್ಕ್ (45) ಮೃತಪಟ್ಟ ಪೊಲೀಸ್ ಸಿಬಂದಿ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ಮೃತಪಟ್ಟರು. ಮೃತ ಪೊಲೀಸ್ ಗಣೇಶ್ ನಾಯ್ಕ್ ಅವರು ಸುರತ್ಕಲ್ , ಬೆಳ್ತಂಗಡಿ, ಹಾಗೂ ವಿಟ್ಲ ದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇತ್ತೀಚೆಗಷ್ಟೇ ಅವರು ಪುತ್ತೂರು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.
ಮೃತರ ಪತ್ನಿ ರೈಲ್ವೆ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪತ್ನಿ, ಪುತ್ರನನ್ನು ಅಗಲಿದ್ದಾರೆ.