ಮಂಗಳೂರು, ಮಾ 10 (DaijiworldNews/MS): ಹಿಜಾಬ್ ವಿವಾದದ ಹಿನ್ನಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ, ಶಾಲಾ ಕಾಲೇಜುಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಮತ್ತೆ ಸೆಕ್ಷನ್ 144ರಂತೆ ನಿಷೇದಾಜ್ಞೆ ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಫೆ 28 ರಿಂದ ಮಾ.5 ರವರೆಗೆ ನಿಷೇದಾಜ್ಞೆ ಹೊರಡಿಸಲಾಗಿತ್ತು. ವಿವಾದ ನ್ಯಾಯಾಲಯದಲ್ಲಿ ಇನ್ನೂ ಇತ್ಯರ್ಥವಾಗದ ಹಿನ್ನಲೆಯಲ್ಲಿ ಹಾಗೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈ ವಿವಾದಕ್ಕೆ ಸಂಬಂಧಿಸಿ ಅಹಿತಕರ ಘಟನೆ ನಡೆದಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮಮ್ಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಶಾಲಾ ಕಾಲೇಜು ಗಳ ಸುತ್ತಲಿನ 200ಮೀ ವ್ಯಾಪ್ತಿ ಪ್ರದೇಶದಲ್ಲಿ ಮತ್ತೆ ಮಾ.8 ರ ಬೆಳಗ್ಗೆ 6ರಿಂದ ಮಾ.12ರ ಸಂಜೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.