ಕಾರ್ಕಳ, ಮಾ 11 (DaijiworldNews/DB): ಪಂಚರಾಜ್ಯ ಚುನಾವಣಾ ಫಲಿತಾಂಶದಲ್ಲಿ ಭಾರತೀಯ ಜನತಾ ಪಾರ್ಟಿ ನಾಲ್ಕು ರಾಜ್ಯಗಳಲ್ಲಿ ಅಧಿಕಾರಕ್ಕೇರುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಭಾರತೀಯ ಜನತಾ ಪಾರ್ಟಿ ಆಡಳಿತ ಭಾರತದ ರಾಜಕಾರಣಕ್ಕೆ ಅಗತ್ಯವಿದೆ ಎನ್ನುವುದನ್ನು ಮತದಾರರು ತೋರಿಸಿಕೊಟ್ಟಿದ್ದಾರೆ ಎಂದು ಕಾರ್ಕಳ ಬಿಜೆಪಿ ಹರ್ಷ ವ್ಯಕ್ತಪಡಿಸದೆ.
ಮುಂದಿನ ವರ್ಷದಲ್ಲಿ ನಡೆಯುವ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಏರುವುದು ಖಚಿತವಾಗಿದೆ. ಕಾಂಗ್ರೆಸ್ ಪಕ್ಷದ ವಿಸರ್ಜನೆಯ ದಿನವು 2022ರ ಡಿಸೆಂಬರ್ ನೊಳಗೆ ನಡೆಯುವುದು ಖಚಿತ ಎಂದು ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಮಹಾವೀರ ಹೆಗ್ಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.