ಮಂಗಳೂರು, ಡಿ 19 (MSP): ಸರಣಿ ಸ್ತ್ರೀ ಹಂತಕ ಸೈನೈಡ್ ಮೋಹನ್ ವಿರುದ್ದ ದಾಖಲಾಗಿರುವ ಅತ್ಯಾಚಾರ ಮತ್ತು ಕೊಲೆ ಪೈಕಿ ಮತ್ತೆ ಎರಡು ಪ್ರಕರಣಗಳ ವಿಚಾರಣೆ ಮುಗಿದಿದ್ದು, ಬುಧವಾರ ತೀರ್ಪು ಪ್ರಕಟಗೊಳ್ಳುವ ಸಾಧ್ಯತೆ ಇದೆ.
ವಿಟ್ಲ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಪತ್ತೆಯಾಗಿ, ಮೈಸೂರು ಬಸ್ ನಿಲ್ದಾಣದಲ್ಲಿ ಮೃತದೇಹ ಪತ್ತೆಯಾದ ಎರಡು ಯುವತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ಹೊರಬೀಳಲಿದೆ. ಇಲ್ಲಿಗೆ ವಿರುದ್ದ ದಾಖಲಾಗಿರುವ ಪ್ರಕರಣಗಳ ಪೈಕಿ ಏಳು ಯುವತಿಯರ ಕೊಲೆ ಪ್ರಕರಣಗಳ ವಿಚಾರಣೆ ಮುಗಿದಂತಾಗಿದೆ. ಇನ್ನೂ ೧೩ ಯುವತಿಯರ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದ ಪ್ರಕರಣ ವಿಚಾರಣೆಗೆ ಬಾಕಿ ಇದೆ.