ಕಾಪು, ಮಾ 14 (DaijiworldNews/HR): ಯುವಕನೊಬ್ಬ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉದ್ಯಾವರ ಗ್ರಾಮದ ಶಂಭುಕಲ್ಲು ದೇವಸ್ಥಾನದ ಬಳಿ ನಡೆದಿದೆ.
ಸಾಂದರ್ಭಿಕ ಚಿತ್ರ
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸಚಿನ್ ಭಂಡಾರಿ (28) ಎಂದು ಗುರುತಿಸಲಾಗಿದೆ.
ಸಚಿನ್ ಲೈನ್ ಸೇಲ್ ಕೆಲಸ ಮಾಡಿಕೊಂಡಿದ್ದು, ಇತ್ತೀಚೆಗೆ ಅವರ ಕುಟುಂಬಕ್ಕೆ ಸೇರಿದ ಮನೆ ಕುಸಿದು ಬಿದ್ದಿರುವುದರಿಂದ ಸಚಿನ್ ತಮ್ಮ ಪೋಷಕರೊಂದಿಗೆ ಸಂಬಂಧಿಕರ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
ಇನ್ನು ಮನೆ ಕುಸಿದು ಬಿದ್ದಿರುವುದು ಹಾಗೂ ಪೋಷಕರ ಅನಾರೋಗ್ಯದಿಂದ ಸಚಿನ್ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821