ಮಂಗಳೂರು, ಮಾ 16 (DaijiworldNews/DB): 12ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೊರ್ಬೆವ್ಯಾಕ್ಸ್ ಲಸಿಕೆ ನೀಡುವ ಸಂಬಂಧ ಜಿಲ್ಲಾ ಮಟ್ಟದ ಉದ್ಘಾಟನಾ ಕಾರ್ಯಕ್ರಮವು ಮಾ.16ರ ಬುಧವಾರ ನಗರದ ವೆನ್ಲಾಕ್ ಆಸ್ಪತ್ರೆ ಆವರಣದಲ್ಲಿರುವ ಆಯುಷ್ಮಾನ್ ವಿಭಾಗದಲ್ಲಿ ನಡೆಯಿತು.
ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಸಿಇಓ ಡಾ. ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಈ ವೇಳೆ ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು.