ಮಂಗಳೂರು, ಮಾ. 16 (DaijiworldNews/SM): ಹಿಜಾಬ್ ವಿವಾದ ಬಗ್ಗೆ ಹೈಕೋರ್ಟ್ ನೀಡಿದ ತೀರ್ಪು ಸ್ವೀಕಾರಾರ್ಹವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಮುಸ್ಲಿಂ ಸಂಘಟನೆಗಳು ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಇದಕ್ಕೆ ಪಾಂಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಂಬಲ ಸೂಚಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಪಾಂಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಯಾಸೀರ್ ಹಸನ್ ಈ ತೀರ್ಪು ಒಪ್ಪತಕ್ಕದಲ್ಲ ಅನ್ಯಾಯದ ತೀರ್ಪು ಇದಾಗಿದೆ. ಇದನ್ನು ಮುಸ್ಲಿಂ ಸಮುದಾಯ ನಾಗರಿಕ ಸಮುದಾಯ ವಿರೋಧಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ಪಾಂಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಂಬಲ ಸೂಚಿಸುತ್ತದೆ ಎಂದಿದೆ.